ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ.

ಅಷ್ಟೆ ಅಲ್ಲದೆ ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜು.9 ರಿಂದ 12 ರವರೆಗೆ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ.

ಮುಂದಿನ ಏಳು ದಿನಗಳ ಕಾಲ ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ವಾಯುಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ವಾಯು ಭಾರದಿಂದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 kmph ತಲುಪುವ ಸಾಧ್ಯತೆಯಿದೆ.

Leave a Comment