ಗುತ್ತಿಗಾರು: ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಗುತ್ತಿಗಾರು ಸಮೀಪದ ವಳಲಂಬೆಯಲ್ಲಿ ಜು.29ರಂದು ಸಂಭವಿಸಿದೆ.
ಸುಳ್ಯದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ಗೆ ಗುತ್ತಿಗಾರು ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ಚೇತನ್ ಎಂಬುವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.