ಕರ್ನಾಟಕ ರಾಜ್ಯ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ವಿನೋದ್ ಮೂಡಗದ್ದೆ ನೇಮಕ

ಸುಳ್ಯ; ಆ.14: ಕರ್ನಾಟಕ ರಾಜ್ಯ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ವಿನೋದ್ ಮೂಡಗದ್ದೆ ಅವರು ನೇಮಕಗೊಂಡಿದ್ದಾರೆ.

ಪತ್ರಕರ್ತರಾಗಿ, ರಂಗಭೂಮಿ ಕಲಾವಿದರಾಗಿ, ಅರೆಭಾಷೆ ನಾಟಕಗಳಲ್ಲಿ ಹಾಗೂ ಕವಿಗೋಷ್ಠಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕೊಡಗು ಚಾನಲ್ ನ ಕಾರ್ಯಕ್ರಮ ನಿರ್ವಾಹಕರಾಗಿ, ಮಡಿಕೇರಿ ಆಕಾಶವಾಣಿ ಉದ್ವೇಷಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಕ್ರೀಡಾಪಟುವಾಗಿ, ಅತ್ಯುತ್ತಮ ಕಾರ್ಯಕ್ರಮ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ.