ಮಡಪ್ಪಾಡಿ: ಆತ್ಮಹತ್ಯೆಗೆ ಯತ್ನಿಸಿದ ವೃದ್ಧ ಆಸ್ಪತ್ರೆಗೆ ದಾಖಲು

ಮಡಪ್ಪಾಡಿ: ವೃದ್ಧರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಮಡಪ್ಪಾಡಿಯಿಂದ ವರದಿಯಾಗಿದೆ.

ಇಲ್ಲಿನ‌‌ ವಾಲ್ತಾಜೆ ನಿವಾಸಿ ಬಾಲಕೃಷ್ಣ ಗೌಡ (72) ಎಂಬವರೇ ಆತ್ಮಹತ್ಯೆಗೆ ಯತ್ನಿಸಿದವರು. ಬಾಲಕೃಷ್ಣರವರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು , ಮನೆಯವರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.