ಪಂಜ; ಆ.15; ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನಾಗತೀರ್ಥ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸ್ವಾತಂತ್ರೋತ್ಸವ ಮೆರವಣಿಗೆ ಮೂಲಕ ಭೇಟಿ ಕೊಟ್ಟರು. ದೇಗುಲದಲ್ಲಿ ಭಜನೆ ಮಾಡಿ ತೀರ್ಥಪ್ರಸಾದ ಸ್ವೀಕರಿಸಿದ ವಿದ್ಯಾರ್ಥಿಗಳನ್ನು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಎಲ್ಲರನ್ನೂ ಸ್ವಾಗತಿಸಿದರು.
ದೇಗುಲದ ವತಿಯಿಂದ ಸಿಹಿತಿಂಡಿ ವಿತರಿಸಿದರು. ಮೆರವಣಿಗೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಗಿರಿಜಾ ಜಲಕದಹೊಳೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಿರ್ಮಲಾ ಕುದ್ವ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ ಕಕ್ಕ್ಯಾನ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.