ಸುಳ್ಯ: ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ

ಸುಳ್ಯ:ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕರ್ನಾಟಕ ಸರಕಾರದ ಆದೇಶದಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ಜಿಲ್ಲಾಪಂಚಾಯತ್ ಕಾರ್ಯನಿರ್ವಾಹನಾಧಿಕಾರಿಗಳು ಭವಾನಿಶಂಕರ್ ಕಲ್ಮಡ್ಕರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.