ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ

ಸುಳ್ಯ, ಆ.28 :ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆಯು ಸುಳ್ಯ ತಾಲೂಕು ಪಂಚಾಯತ್ ಕಚೇರಿಯ ಕಟ್ಟಡದಲ್ಲಿ ನಡೆಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್‌ ಮುಂಡೋಡಿ ಟೇಪ್‌ ಕತ್ತರಿಸಿ, ಮಾಜಿ ಸಚಿವ ಬಿ ರಮಾನಾಥ ರೈ ದೀಪ ಬೆಳಗಿಸಿ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್ ಕುಮಾ‌ರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.