ಸುಳ್ಯ: ನ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷತೆಗೆ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಬುದ್ಧ ನಾಯ್ಕ ಅವರನ್ನು ಬಿಜೆಪಿ ಘೋಷಣೆ ಮಾಡಿದೆ.

ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷತೆಗೆ ಬುದ್ಧ ನಾಯ್ಕ ಅವರು ಇದೀಗ ನಾಮಪತ್ರ ಸಲ್ಲಿಸಲಿದ್ದಾರೆ. ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಮುಖಂಡರು ಚರ್ಚೆ ನಡೆಸಿದ ಬಳಿಕ ಅಧಿಕೃತವಾಗಿ ಘೋಷಿಸಲಾಯಿತು.