ಸುಳ್ಯ: ಸುಳ್ಯ ನಗರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿಯ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಬುದ್ಧ ನಾಯ್ಕ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ. ಕಳೆದ 15 ತಿಂಗಳುಗಳಿಂದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆದಿದ್ದು, ಇದೀಗ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೊಂದಿಗೆ ಮತ್ತೊಮ್ಮೆ ಆಡಳಿತಕ್ಕೆ ವೇಗ ಸಿಗಲಿದೆ.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರು, ನಗರ ಪಂಚಾಯತ್ ಆಡಳಿತಾಧಿಕಾರಿ ಮಂಜುನಾಥ್ ಜಿ., ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಉಪಸ್ಥಿತರಿದ್ದರು. ಸಹಾಯಕ ಚುನಾವಣಾ ಅಧಿಕಾರಿ ಚಂದ್ರಕಾಂತ್ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದರು.