ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದ ಶಾಲೆ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.