ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶುಕ್ರವಾರ ಸುಬ್ರಹ್ಮಣ್ಯ – ಕಡಬ ಹೆದ್ದಾರಿಯ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಸಂಭವಿಸಿದೆ.

ಮಡಿಕೇರಿಯ ಪ್ರಶಾಂತ ಎಂಬವರು ತಮ್ಮ ಕಾರಿನಲ್ಲಿ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಪಲ್ಟಿಯಾಗಿದೆ. ಕಾರಿನಲ್ಲಿ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.