ಸುಳ್ಯ: ಇಲ್ಲಿನ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯು ನಾಳೆ(ಸೆ.22) ಪೂರ್ವಾಹ್ನ 11 ಗಂಟೆಗೆ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವುದು.
ಸಂಘದ ಅಧ್ಯಕ್ಷ ಪಿ.ಸಿ. ಜಯರಾಮರವರು ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ತಿಳಿಸಿದೆ.