ಸುಳ್ಯ: ಇಲ್ಲಿನ ಗೌಡರ ಯುವ ಸೇವಾಸಂಘದಿಂದ ಪ್ರವರ್ತಿಸಲ್ಪಡುತ್ತಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ.22ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಪಿ.ಸಿ ಜಯರಾಮರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘವು ವರದಿ ವರ್ಷದಲ್ಲಿ 1060 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 2.01 ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 19 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು ಪ್ರತೀ ಸದಸ್ಯರಿಗೂ ಶೇ.15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ ಘೋಷಿಸಿದರು.

ಮಹಾಸಭೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಮುಂದಿನ ದಿನಗಳಲ್ಲಿ ಸಂಘವು ಹೆಚ್ಚಿನ ಶಾಖೆಗಳನ್ನು ತೆರೆದು ಆರ್ಥಿಕವಾಗಿ ಯಶಸ್ಸು ಸಾಧಿಸುವ ಕುರಿತಂತೆ ಆಡಳಿತ ಮಂಡಳಿ ತೀರ್ಮಾನಿಸಿರುವುದಾಗಿ ಪಿ.ಸಿ ಜಯರಾಮರವರು ಹೇಳಿದರು.

ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿದ್ದು, ಹಾಜರಾದ ಸದಸ್ಯರೆಲ್ಲರಿಗೂ ಸಂಘದ ವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು.
ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥ ಸ್ವಾಗತಿಸಿ, ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಂದಿಸಿದರು.
ವೇದಿಕೆಯಲ್ಲಿ ನಿರ್ದೇಶಕರಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ ತೀರ್ಥರಾಮ, ಚಂದ್ರ ಕೋಲ್ಚಾರ್, ಕೆ.ಸಿ ನಾರಾಯಣ ಗೌಡ, ಕೆ.ಸಿ ಸದಾನಂದ, ಪಿ.ಎಸ್ ಗಂಗಾಧರ, ದಿನೇಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ.ಕೆ, ನವೀನ್ ಜಾಕೆ, ಶೈಲೇಶ್ ಅಂಬೆಕಲ್, ಜಯಲಲಿತಾ ಕೆ.ಎಸ್, ಲತಾ ಮಾವಾಜಿ, ನಳಿನಿ ಸೂರಯ್ಯ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮನೋಜ್ ಕುಮಾರ್, ಕುಸುಮಾಧರ ಜಿ ಉಪಸ್ಥಿತರಿದ್ದರು.