ಸುಳ್ಯ: ಇಲ್ಲಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಸುಳ್ಯ ಪೋಲಿಸರು ಬಂಧಿಸಿ ಕರೆತಂದಿದ್ದಾರೆ .
ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬಸ್ ನಲ್ಲಿ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಆರೋಪಿ ಅಬ್ದುಲ್ ನಿಯಾಝ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ಇದಕ್ಕೂ ಮೊದಲು ಆರೋಪಿಯ ಮೇಲೆ ಹಲ್ಲೆಗೈದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿದ್ಯಾರ್ಥಿನಿಯ ಪ್ರತಿದೂರಿನ ಮೇಲೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.