ಕನ್ನಡ ಜ್ಯೋತಿ ರಥಕ್ಕೆ ಕಸಾಪ ಹಾಗೂ ತಾಲೂಕು ಆಡಳಿತದಿಂದ ಭವ್ಯ ಸ್ವಾಗತ

ಸಮಗ್ರ ನ್ಯೂಸ್: ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸೆ.30 ರಂದು ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ, ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅರವಿಂದ್ ಕೆ ಎಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನ.ಪಂ ಮುಖ್ಯಾಧಿಕಾರಿ ಸುಧಾಕರ ಎಂ.ಹೆಚ್, ಬಿ ಇ ಒ ಶೀತಲ್ ಯು.ಕೆ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಪ್ರಕಾಶ್‌ ಮೂಡಿತ್ತಾಯ ಹಾಗೂ ಸಾಹಿತಿಗಳು ಸೇರಿದಂತೆ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.