ಸುಳ್ಯ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದ.ಕ ಮತ್ತು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ನ.12 ರಂದು, ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಮಿತ್ತಡ್ಕ ಇಲ್ಲಿ ನಡೆಯಲಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರೊಟೇರಿಯನ್ ಪಿಪಿ.ಪಿಹೆಚ್ ಎಫ್ ಪ್ರಭಾಕರನ್ ನಾಯರ್ ವಹಿಸಲಿದ್ದಾರೆ. ಸಿ. ಡಿ ಜಯಣ್ಣ ಉಪನಿರ್ದೇಶಕರು, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ದ.ಕ ಇವರು ಉದ್ಘಾಟಿಸಲಿದ್ದಾರೆ. ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿಗಳು ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ರೊಟೇರಿಯನ್ ಯೋಗಿತಾ ಗೋಪಿನಾಥ್ ಅಧ್ಯಕ್ಷರು ರೋಟರಿ ಚಾರಿಟೇಬಲ್ ಟ್ರಸ್ಟ್ (ರಿ) ಸುಳ್ಯ , ಶ್ರೀಮತಿ ಶೋಭಾ ಬೊಮ್ಮಟ್ಟಿ, ಪ್ರಾಂಶುಪಾಲರು ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ, ಶ್ರೀ ರಾಧಾಕೃಷ್ಣ ದೈಹಿಕ ಶಿಕ್ಷಣ ಶಿಕ್ಷಕರು, ಎಸ್ ಎಸ್ ಪಿ ಯು ಕಾಲೇಜ್ ಸುಬ್ರಮಣ್ಯ ಇವರು ಉಪಸ್ಥಿತರಿರಲಿದ್ದಾರೆ.