ಕುಕ್ಕೆ ಸುಬ್ರಹ್ಮಣ್ಯ: ಚಂಡಮಾರುತ ಮುನ್ನೆಚ್ಚರಿಕೆ| ತೀರ್ಥಸ್ನಾನಕ್ಕೆ ಕುಮಾರಧಾರಾ ನದಿಗಿಳಿಯದಂತೆ ಸೂಚನೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆ ಮೂಲಕ ತೀರ್ಥಸ್ನಾನಕ್ಕೂ ಚಂಡಮಾರುತದ ಎಫೆಕ್ಟ್ ತಟ್ಟಿದೆ.

ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಾಕಷ್ಟು ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಾಪಾತ್ರ ಸೂಚಿಸಿದ್ದಾರೆ.

ಈ ನಡುವೆ ಕ್ಷೇತ್ರದ ಸುತ್ತಮುತ್ತ ಕಾಡಾನೆ ಸಂಚಾರ ಕಂಡುಬಂದಿದ್ದು, ಎಚ್ಚರಿಕೆಯಿಂದ ಇರುವಂತೆ ಭಕ್ತಾದಿಗಳಿಗೆ, ಗ್ರಾಮಸ್ಥರಿಗೆ ದೇವಳದ ವತಿಯಿಂದ ಸೂಚನೆ ಹೊರಡಿಸಲಾಗಿದೆ. ಚಂಪಾಷಷ್ಟಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾದಿಗಳು ‌ಭೇಟಿ ನೀಡುತ್ತಿದ್ದಾರೆ.