ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಕಲ್ಲುಗುಂಡಿಯಲ್ಲಿ ಡಿ 19 ರಂದು ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ KA -6-D9844 ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯ ಮರಕ್ಕೆ ಗುದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.