ಮರ್ಕಂಜ: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮರ್ಕಂಜ ಸಮೀಪದ ನೆಲ್ಲೂರುಕೇಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ಇಲ್ಲಿನ ನಿವಾಸಿ ವಿನೋದ (43) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಾತ ಈಕೆಯ ಪತಿ ರಾಮಚಂದ್ರ(54) ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.