ಕಡಬ: ಪ್ರಥಮ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಗೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ರೈ ಆರ್ತಿಲ, ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಕಡಬ ತಾಲೂಕಿನ ಆರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ಅವರ ಪುತ್ರಿ. ಈ ಅವಕಾಶ ಮೊದಲಿಗೆ ಇವರ ತಾಯಿ ತಾರಾ ರೈ ಅವರಿಗೆ ಬಂದಿತ್ತು ಆದರೆ ಅವರು ತಮ್ಮ ವೈಕ್ತಿಕ ಕಾರಣಗಳಿಂದ ತಿರಸ್ಕಾರ ಮಾಡಿದರು. ನಂತರ ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ಅವರಿಗೆ ಕಡಬ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಎನ್, ಇವರೂ ಮಾನಸಿಕ ಧೈರ್ಯ ತುಂಬಿದರು. ಮೊದಲಿಗೆ ಕಾಲೇಜಿನ ಓದಿಗೆ ತೊಂದರೆ ಆಗುತ್ತದೆ ಎಂದಿದ್ದ ಸ್ವಾತಿ ರೈ ಕೊನೆಗೆ ಬಂದ ಅವಕಾಶ ಬಿಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ಮಾಡಿದರು.