ವಳಲಂಬೆ ಜಾತ್ರೋತ್ಸವದ ಗೊನೆ ಮುಹೂರ್ತ

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.1 ಮತ್ತು 2 ರಂದು ಜಾತ್ರೋತ್ಸವ ನಡೆಯಲಿದ್ದು ಇದರ ಅಂಗವಾಗಿ ಗೊನೆ ಮುಹೂರ್ತ ಜ.25ರಂದು ನೆರವೇರಿತು. ಈ ಸಂದರ್ಭದಲ್ಲಿ ಅರ್ಚಕರಾದ ಮಹಾಬಲೇಶ್ವರ ಭಟ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ಗುತ್ತಿಗಾರು ಮುತ್ತಪ್ಪ ದೈವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಟ್ ವಳಲಂಬೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರು, ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು