ಸುಳ್ಯ ಕಾಂಗ್ರೆಸ್ ಪಾಳಯದಲ್ಲಿ ಭಿನ್ನರಾಗ| ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ತಾತ್ಕಾಲಿಕ ತಡೆ

ಸುಳ್ಯ: ಇಲ್ಲಿನ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ವಾರದ ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ.

ರಾಧಾಕೃಷ್ಣ ಬೊಳ್ಳೂರು ಅವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಡಿ.ಕೆ.ಶಿವಕುಮಾ‌ರ್ ಹೊರಡಿಸಿದ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಬೊಳ್ಳೂರುರವರಿಗೆ ನೀಡಿದ್ದರು.

ಬೊಳ್ಳೂರುರವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನಗೊಂಡ ಸುಳ್ಯದ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ.

ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ತಡೆಹಿಡಿದು ಆದೇಶ ಮಾಡಿದ್ದಾರೆ.