ಹರಿಹರ ಪಲ್ಲತ್ತಡ್ಕ: ದಿಢೀರ್ ಅಸ್ವಸ್ಥಗೊಂಡು ಗ್ರಾ.ಪಂ ಮಾಜಿ ಸದಸ್ಯ‌ ಸಾವು

ಕೊಲ್ಲಮೊಗ್ರು: ಅಸ್ವಸ್ಥಗೊಂಡು ಕಡಬ ತಾಲೂಕಿನ ಐನೆಕಿದು ಗ್ರಾಮದ ನವೀನ್‌ ಕಟ್ರಮನೆ (35) ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ನವೀನ್‌ ಅವರು ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ನವೀನ್‌ ಅವರ ಪತ್ನಿ ಕೂಡ ತೀವ್ರ ಅಸ್ವಸ್ಥರಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ ಕೆಲಸದವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಫುಡ್‌ ಪಾಯಿಸನ್‌ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೀನ್‌ ಕಟ್ರಮನೆ ಅವರು ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ಮಾಜಿ ಸದಸ್ಯರಾಗಿದ್ದು, ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು.