ಜಾಲ್ಸೂರು: ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; ಪ್ರಯಾಣಿಕರು ಪಾರು

ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪೊಂದು ತೋಟಕ್ಕೆ ಪಲ್ಟಿಯಾದ ಘಟನೆ ಏ.3ರಂದು ಜಾಲ್ಸೂರು ಬಳಿಯ ಅಡ್ಕಾರ್ ನಲ್ಲಿ ಸಂಭವಿಸಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಥಾರ್ ಜೀಪು ಅಡ್ಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತೋಟಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಜೀಪ್‌ನೊಳಗಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಜೀಪ್ ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.