ಸುಳ್ಯ: ಗಾಂಜಾ ಸೇವನೆ ಮತ್ತು ಮಾರಾಟದ ಗುಮಾನಿಯ ಮೇರೆಗೆ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯದ ಕುರುಂಜಿಭಾಗ್ ನಿಂದ ವರದಿಯಾಗಿದೆ.
ಇಲ್ಲಿನ ಖಾಸಗಿ ಕಾಲೇಜು ಸಮುಚ್ಚಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಂದು ಕಿಡಿಗೇಡಿಗಳು ಗಾಂಜಾ ಮಾರಾಟ ಮಾಡುತ್ತಿದ್ದು ಈ ಸಂಬಂಧ ಆಗಾಗ್ಗೆ ಈ ಪ್ರದೇಶದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿತ್ತು. ಈ ಕುರಿತಂತೆ ಮಾಹಿತಿ ಪಡೆದ ಸುಳ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಾಲೇಜು ಕ್ಯಾಂಪಸ್ ಹೋಟೆಲ್ ಗಳಲ್ಲಿ ಮದ್ಯ ಮಾರಾಟ ಹಾಗೂ ಗೂಡಂಗಡಿಳಲ್ಲಿ ಗಾಂಜಾ ಹಾಗು ಇನ್ನಿತರ ಅಮಲು ಸೇವನೆಗಳ ಮಾರಾಟ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಅಬಕಾರಿ ಅಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಳಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆಗಳು ಎದುರಾಗುವ ಸಂದರ್ಭಗಳು ಎದುರಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.