ಸಂಪಾಜೆ: ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಲಾರಿ

ಸಮಗ್ರ ನ್ಯೂಸ್: ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತಿದ್ದ ಲಾರಿಯೊಂದು ಏಕಾಏಕಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಯನಾಡು ಸಮೀಪ ಇಂದು(ಎ.29) ಮುಂಜಾನೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಕೊಯನಾಡು ಸಮೀಪ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು , ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.