ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ

ಮೇ .11 ರಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು.

ಮೇ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆಯಾಗಿದ್ದಾರೆ. ಅಧ್ಯಕ್ಷತೆಗೆ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಮುಖಂಡರು ಸಭೆ ನಡೆಸಿ ಅಧ್ಯಕ್ಷತೆ ವಿಚಾರದಲ್ಲಿ ಸಮನ್ವತೆ ಸಾಧಿಸಿದ ಬಳಿಕ

ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಡಾ.ಬಿ.ರಘು, ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಹರೀಶ್ ಇಂಜಾಡಿ, ಲೀಲಾ ಮನಮೋಹನ, ಪ್ರವೀಣ ಮರುವಂಜ, ಸೌಮ್ಯ ಭರತ್, ಅಜಿತ್ ಅವರು ನೇಮಕಗೊಂಡಿದ್ದಾರೆ. ಮಹೇಶ್‌ಕುಮಾರ್ ಕರಿಕ್ಕಳ ಈ ಹಿಂದೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.