ಮಹಿಳೆಯೊಂದಿಗೆ ಅನುಚಿತ ವರ್ತನೆ| ದೇವಚಳ್ಳ ಗ್ರಾ.ಪಂ ಅಧ್ಯಕ್ಷನ ಮೇಲೆ ಬಿತ್ತು ಕೇಸು

ಎಲಿಮಲೆ: ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ‌ ದೇವಚಳ್ಳ ಗ್ರಾ.ಪಂ ಅಧ್ಯಕ್ಷರ ಮೇಲೆ ಕೇಸು ದಾಖಲಾದ ಬಗ್ಗೆ ವರದಿಯಗಿದೆ.

ಗ್ರಾ.ಪಂ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮೇಲೆ ಕೇಸು ದಾಖಲಾಗಿದ್ದು, ಕಾರಿನಲ್ಲಿ ಕರೆದೊಯ್ದು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಪ್ಪಿಸಿಕೊಂಡ ಮಹಿಳೆ ಮನೆಗೆ ಬಂದು ಪತಿಗೆ ವಿಷಯ ತಿಳಿಸಿ ದೂರು ನೀಡಿದ್ದಾಗಿ ತಿಳಿದುಬಂದಿದೆ.

ಸುಬ್ರಹ್ಮಣ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.