ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎನ್ಎಂಪಿಯು ಕಾಲೇಜು ಬಳಿ ತಿರುವಿನಲ್ಲಿ ನಡೆದ ಸಾರಿಗೆ ಬಸ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರಿಗೆ ಗಾಯಗಳಾದ ಘಟನೆ ಜೂ.25ರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಜಖಂಗೊಂಡಿದ್ದು, ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.