ಅರಂತೋಡು: ಹೊತ್ತಿ ಉರಿದ ಘನತ್ಯಾಜ್ಯ ಘಟಕ

ಅರಂತೋಡು: ಇಲ್ಲಿನ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕ ಹೊತ್ತಿ ಉರಿದ ಘಟನೆ ಬುಧವಾರ ವರದಿಯಾಗಿದೆ.
ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಪರಿಕರಗಳು ಸೇರಿ ಅಪಾರ ಹಾನಿ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದು. ಘನ ತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ಉಪಕರಣಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.