ಕೊಳ್ತಿಗೆ: ನೇಣು ಬಿಗಿದು ಆತ್ಮಹತ್ಯೆ

ಬೆಳ್ಳಾರೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಪೆರ್ಲಂಪಾಡಿ ಎಂಬಲ್ಲಿ ಘಟನೆ ಜು.14ರಂದು ನಡೆದಿದೆ.

ಪೆರ್ಲಂಪ್ಪಾಡಿಯ ಹೊಳೆಯ ದಡದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಮೃತಪಟ್ಟವರನ್ನು ಮಹೇಶ್ (31 ) ವರ್ಷ ಎಂದು ಗುರುತಿಸಲಾಗಿದೆ.

ಮೂಲತ: ಕೇರಳದವರಾದ ಇವರು ಪೆರ್ಲಂಪಾಡಿಯ ಸಂಬಂಧಿಕರ ಮನೆಗೆ ಬಂದಿದ್ದ ಇವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಆಗಮಿಸಿ ಮೃತದೇಹವನ್ನು ಪರಿಶೀಲನೆ ನಡೆಸಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಬಳಿಕ ಮೃತದೇಹವನ್ನು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.