ಗುತ್ತಿಗಾರು:: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಬಾಬು ಮಾಸ್ತರ್, ಶಾಲಾ ಮಕ್ಕಳು ದುಶ್ಚಟಗಳಿಂದ ದೂರವಿದ್ದು ಶಾಲಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಹಾಗೂ ಹಿರಿಯರಿಗೆ ಗೌರವ ಕೊಡುವುದರ ಜತೆಗೆ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡಬೇಕು ಎಂದರು.
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಹತ್ವದ ಬಗ್ಗೆ ತರಬೇತುದಾರರಾದ ಲೋಕೇಶ್ ಪೀರನಮನೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಶುಂಪಾಲೆ ಚೆನ್ನಮ್ಮ ಪಿ. ವಹಿಸಿದ್ದರು.
ವಲಯ ಮೇಲ್ವಿಚಾರಕರಾದ ರಾಜೇಶ್.ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಂಜಿತ್ ಕಾರ್ಯಕ್ರಮ ನಿರ್ವಹಿಸಿದರು.