ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ನಶಾ ಮುಕ್ತ ಭಾರತ್ ಅಭಿಯಾನ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಆ್ಯಂಟಿ ಡ್ರಗ್ ಘಟಕವು ಜಂಟಿಯಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ಸಿ ಎಚ್ ಸಿ ಕಡಬ ದ ಆರ್ ಎಚ್ .ಎಸ್. ಕೆ ಕೌನ್ಸಿಲರ್ ಶ್ವೇತಾ ರೈ ಮಾದಕ ವಸ್ತು ಸೇವನೆಯಿಂದ ಉಂಟಾಗುವ ಪರಿಣಾಮವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ಉಮರ್ ಖಾನ್ ಹಾಗೂ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಎಸ್. ಎಚ್.ಐ. ಓ‌.‌ ಬಸವರಾಜ್, ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಎಸ್ ಪಿ ಎಚ್ ಸಿ ಓ ಭಾಗ್ಯ ಬಿ ಎನ್, ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಪಿ .ಎಚ್. ಸಿ.ಓ ಸುಜಾತ ಹಾಗೂ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಆರತಿ.ಕೆ ಉಪಸ್ಥಿತರಿದ್ದರು.

ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಸುಮಿತ್ರ ಸ್ವಾಗತಿಸಿದರು. ಸಂಖ್ಯಾ ನಿರೂಪಿಸಿ, ಆ್ಯಂಟಿ ಡ್ರಗ್ ಘಟಕದ ಸಂಯೋಜಕಿ ನಮಿತಾ ವಂದಿಸಿದರು.