ಸುಳ್ಯ: ಕೊನೆಯ ಸೋಣ ಶನಿವಾರದ ಹಿನ್ನಲೆಯಲ್ಲಿ ತಾಲೂಕಿನ ವಿವಿಧ ದೇಗುಲಗಳಲ್ಲಿ ಇಂದು(ಸೆ.13) ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಸುಳ್ಯದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ತೊಡಿಕಾನ ಮಹಾವಿಷ್ಣು ದೇವಸ್ಥಾನ, ರೆಂಜಾಳ ಸದಾಶಿವ ಮಹಾಗಣಪತಿ ದೇವಸ್ಥಾನ, ಸುಳ್ಯ ಚೆನ್ನಕೇಶವ ಸನ್ನಿಧಿ, ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇಗುಲ, ಐವರ್ನಾಡು ಪಂಚಲಿಂಗೇಶ್ವರ ಸನ್ನಿಧಿ, ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ, ನಿಡ್ವಾಳ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ವಿಶೇಷ ಬಲಿವಾಡು ಕೂಟ, ಶನಿಪೂಜೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಆಡಳಿತ ಮಂಡಳಿಗಳು ವಿನಂತಿಸಿವೆ.