ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ಕಾಲೇಜಿನ ಭಾಷಾ ಸಂಘವು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ. 18 ರಂದು ವಿದ್ಯಾರ್ಥಿಗಳಿಗೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿತ್ತು.
ವಿದ್ಯಾರ್ಥಿಗಳ ಕಲಾ ಕೌಶಲವನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಸಭಾಂಗಣದಲ್ಲಿ ಸ್ಪರ್ಧೆಯನ್ನು ನಡೆಸಲಾಯಿತು.ವಿದ್ಯಾರ್ಥಿಗಳು ಪರಿಸರಸ್ನೇಹಿ ಗೂಡುದೀಪಗಳನ್ನು ರಚಿಸಿ ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು. ಭಾಷಾ ಸಂಘದ ಸಂಯೋಜಕ ಉದಯಕುಮಾರ, ಸ್ಪರ್ಧೆಯ ಸಂಯೋಜಕಿ ವನಿತಾ ಕೆ ಎನ್ ಹಾಗೂ ಭಾಷಾ ಸಂಘದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.