ಗುತ್ತಿಗಾರು: ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ಚಾಲನೆ ನೀಡಲಾಯಿತು.
ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರದಿಂದ ನಡೆದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ಚಾಲನೆ ನೀಡಿದರು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಪುಸ್ತಕ ಪ್ರದರ್ಶನದ ಉದ್ಘಾಟನೆ ನೆರವೇರಿಸಿದರು.
ಹಿರಿಯ ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು.
ಸಾಹಿತಿ, ಸಂಶೋಧಕರು ಹಾಗೂ ಕಿನ್ನಿಗೋಳಿ ಪಾಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ.ಕೆ.ವಿ ಕರಂಗಲ್ಲು ರವರು ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಿದರು. ಪತ್ರಕರ್ತರಾದ ಮಹೇಶ್ ಪುಚ್ಚಪ್ಪಾಡಿ ರವರ “ಸಂತೆಯಲ್ಲಿ ಸಾಗುತ್ತಿರುವ ನಾವು” ಎಂಬ ಕೃತಿಯ ಮುಖವರ್ಣಿಕೆಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಬಿಡುಗಡೆಗೊಳಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಎಂ.ಪಿ ಶ್ರೀನಾಥ್ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಸ್ವಾಗತಿಸಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಕೇಶವ ಹೊಸೊಳಿಕೆ ವಂದಿಸಿದರು. ಕ.ಸಾ.ಪ. ಸುಳ್ಯ ಹೋಬಳಿ ಅಧ್ಯಕ್ಷೆ ಚಂದ್ರಮತಿ ಕೆ. ನಿರೂಪಿಸಿದರು.