ಸಂಪಾಜೆ: ಹಿಟ್ & ರನ್| ರಿಕ್ಷಾ ಚಾಲಕ ಸಾವು

ಸಂಪಾಜೆ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.