ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ

ಸುಬ್ರಹ್ಮಣ್ಯ: ಇಲ್ಲಿನ‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾದಕ ದ್ರವ್ಯ ವಿರೋಧಿ ಘಟಕ, ಮಾದಕ ದ್ರವ್ಯ ವಿರೋಧಿ ಘಟಕ
ಮತ್ತು ಸಮಾಜಶಾಸ್ತ್ರ ವಿಭಾಗ ಜಂಟಿಯಾಗಿ ‘ಆಂಟಿ ರಾಗ್, ಆಂಟಿ ಡ್ರಗ್ ಮತ್ತು ಪೋಕ್ಸೊ’ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಹ್ಮಣ್ಯ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ವಿದ್ಯಾರ್ಥಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಮಾದಕ ವ್ಯಸನ, ರ‍್ಯಾಗ್ಗಿಂಗ್ ಚಟುವಟಿಕೆಗಳು ಮತ್ತು ಪೋಕ್ಸೊ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಮತ್ತು ಸಮಾಜದ ಆರೋಗ್ಯವನ್ನು ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮದೇ ಆದ ಉಪಕ್ರಮದಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಮಾದಕ ದ್ರವ್ಯ ವಿರೋಧಿ ಘಟಕ ಮತ್ತು ರೇಗಿಂಗ್ ವಿರೋಧಿ ಘಟಕಗಳ ಸಂಯೋಜಕರಾದ ಶಿವಪ್ರಸಾದ್ ಎಸ್, ನಮಿತಾ ಎಂ.ಎ ವನಿತಾ ಕೆ.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು ಮತ್ತು ತೃತೀಯ ಬಿ.ಕಾಂ.ನ ವಿದ್ಯಾರ್ಥಿ ಪ್ರತಿನಿಧಿ ಜೀವಿತ್ ಧನ್ಯವಾದ ಅರ್ಪಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅನನ್ಯಾ ಕಾರ್ಯಕ್ರಮ ನಿರೂಪಿಸಿದರು.