ಸುಬ್ರಮಣ್ಯ: ಕೆ .ಎಸ್.ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ,ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ

ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕವು ಜಂಟಿಯಾಗಿ ಜು.24 ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಬಾಬುರೆಡ್ಡಿ ಆಗಮಿಸಿದ್ದರು, ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಯಾದ ಆಂಜನೇಯ ರೆಡ್ಡಿ ಉಪಸ್ಥಿತರಿದ್ದರು. ಆ್ಯಂಟಿ ಡ್ರಗ್ ಘಟಕ ಸಂಯೋಜಕರಾದ ಶ್ರೀ ಮನೋಹರ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಸುಮಿತ್ರ ವಂದಿಸಿದರು, ಶ್ರೀಮತಿ ಆರತಿ ಕಾರ್ಯಕ್ರಮ ನಿರೂಪಿಸಿದರು.