ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಡಾ. ರವಿ ಕಕ್ಕೆಪದವು  ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಅಶ್ವಿನಿ ಹೆಚ್., ಸಹಾಯಕ ಪ್ರಾಧ್ಯಾಪಕರು, ಮನೋವಿಜ್ಞಾನ ವಿಭಾಗ, ಎಸ್.ಡಿ.ಎಂ. ಕಾಲೇಜು, ಉಜಿರೆ ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಅತಿಯಾದ ಬಳಕೆಯಿಂದ ಮಾನಸಿಕ ಒತ್ತಡ, ಏಕಾಗ್ರತೆ ಕೊರತೆ ಉಂಟಾಗಿ ಶೈಕ್ಷಣಿಕ ಕಾರ್ಯಕ್ಷಮತೆ ಕುಸಿಯುತ್ತಿದೆ. ಇದನ್ನು ತಡೆಗಟ್ಟಲು ಪೋಷಕರು ಜಾಗೃತರಾಗಿ ಮಕ್ಕಳನ್ನು ಓದು, ಆಟ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ.  ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಅಶ್ವಿನಿ ಎಸ್.ಎನ್.  ಸಂಘದ ಲೆಕ್ಕಪತ್ರವನ್ನು ಮಂಡಿಸಿದರು. ಸಂಘದ ಸಂಯೋಜಕರ ಡಾ. ಪ್ರಸಾದ ಎಸ್. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ  ನಡೆಸಿದರು.

ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಶಶಿ ಕೆ. ಅವರು ಧನ್ಯವಾದ ಸಮರ್ಪಿಸಿ, ಹಿಂದಿ ಉಪನ್ಯಾಸಕಿ ಶ್ರೀಮತಿ ಭಕ್ತಿಶ್ರೀ ಕೆ.ಬಿ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.