ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯದಲ್ಲಿ ಯುವ ರೆಡ್‌ಕ್ರಾಸ್ ಸ್ವಯಂಸೇವಕರ ಅಭಿವಿನ್ಯಾಸ ಕಾರ್ಯಕ್ರಮ

 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಯುವ ರೆಡ್‌ಕ್ರಾಸ್ (YRC) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ (IQAC) ಸಂಯುಕ್ತ ಆಶ್ರಯದಲ್ಲಿ ಯುವ ರೆಡ್‌ಕ್ರಾಸ್ ಸ್ವಯಂಸೇವಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 30ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ವಹಿಸಿದ್ದರು. ಸುಳ್ಯ ತಾಲೂಕು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಶ್ರೀ ಪಿ. ಬಿ. ಸುಧಾಕರ ರೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವ ರೆಡ್‌ಕ್ರಾಸ್‌ನ ಉದ್ದೇಶ, ಮಾನವೀಯ ಸೇವೆ, ರಕ್ತದಾನ, ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣೆ ಹಾಗೂ ಸಮಾಜ ಸೇವೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ಸ್ವಾತಿ ಕೆ. , ಶ್ರೀಮತಿ ಶಶಿ ಕೆ. , ಘಟಕದ ನಾಯಕರಾದ ರಶ್ಮಿ, ಸತೀಶ್ ಹಾಗೂ ಶ್ರೀಕಾಂತ್ ಉಪಸ್ಥಿತರಿದ್ದರು. 

ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ಸ್ವಾತಿ ಕೆ. ಸ್ವಾಗತಿಸಿ, ಯೂತ್ ರೆಡ್ ಕ್ರಾಸ್ ವಿದ್ಯಾರ್ಥಿ ನಾಯಕ ಸತೀಶ್, ದ್ವಿತೀಯ ಬಿ.ಕಾಂ. ವಂದನಾರ್ಪಣೆ ಸಲ್ಲಿಸಿದರು.ಪೃಥ್ವಿರಾಜ್,ದ್ವಿತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.