ಸುಬ್ರಹ್ಮಣ್ಯ:  ಕೆಎಸ್ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ 

ಕೆಎಸ್ಎಸ್ ಕಾಲೇಜಿನಲ್ಲಿ 2026ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸೆ. 7ರಂದು ನಡೆಯಿತು. 

ಜಿ.ಎಫ್.ಜಿ.ಸಿ. ಬೆಟ್ಟಂಪಾಡಿ ಕಾಲೇಜು, ಪುತ್ತೂರು ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ. ವಹಿಸಿದ್ದರು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಸೀತಾರತ್ನ ದೇವ ಹಾಗೂ 2025–26ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಂತಿಮ ಬಿ.ಎ. ವಿಭಾಗದ ಅರ್ಚನಾ, ಅಂತಿಮ ಬಿ.ಕಾಂ. ವಿಭಾಗದ ನಿಶಾ ಹಾಗೂ ಅಂತಿಮ ಬಿ.ಬಿ.ಎ. ವಿಭಾಗದ ಸಂಜನ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಶಶಿ, ಶ್ರೀಮತಿ ಪುಷ್ಪಾ ಡಿ. ಹಾಗೂ ಶೃಜನ್ ಮುಂಡೋಡಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಿತೀಶ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿಶಾ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಿಪಿನ್ ವಂದಿಸಿದರು. ಸಂಖ್ಯಾ ಹಾಗೂ ವರ್ಷಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.