ಸುಳ್ಯ: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣವನ್ನು ಖಂಡಿಸಿ, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ.
ಆ.೧೨ರAದು ಮದ್ದೂರಿನಿಂದ ಆರಂಭವಾದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಶಾಸಕ, ಮಾಜಿ ಸಚಿವ ಎಸ್ ಅಂಗಾರ ರವರು ಪಾಲ್ಗೊಂಡಿದ್ದಾರೆ. ಇವರ ಜೊತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸೇರಿದಂತೆ ಸುಳ್ಯ ಬಿಜೆಪಿಯ ಮಂಡಲ ಸಮಿತಿಯ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.