ಆಲೆಟ್ಟಿ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಸಾವು

ಆಲೆಟ್ಟಿ: ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಶಶಿಧರನ್ ಆಲೆಟ್ಟಿಯವರು( 73) ಮಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆ.10 ರಂದು ಬೆಳಗ್ಗೆ
ಆಲೆಟ್ಟಿಯಿಂದ ಸುಳ್ಯಕ್ಕೆ ತಮ್ಮ ಬೈಕಿನಲ್ಲಿ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು ಗಾಯಗೊಂಡ ಅವರನ್ನು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ತಲೆಯ ಭಾಗಕ್ಕೆ ವಿಪರೀತ ಗಾಯಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ‌ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.