ಜಾಲ್ಸೂರು; ಆ 15: ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ದತ್ತಿನಿಧಿ ವಿತರಣೆ ಕಾರ್ಯಕ್ರಮ ನಡೆಯಿತು.
ಪಯಸ್ವಿನಿ ಪ್ರೌಢ ಶಾಲಾ ಸಂಚಾಲಕ ಜಾಕೆ ಸದಾನಂದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಂತರ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಕೆ. ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಕದಿಕಡ್ಕ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಜಂಟಿಯಾಗಿ ಜಾಲ್ಸೂರು ಪೇಟೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಜೈ ಘೋಷದೊಂದಿಗೆ ಬೃಹತ್ ಮೆರವಣಿಗೆ ನಡೆಯಿತು.

ಈ ವೇಳೆ ಜಾಲ್ಸೂರು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಲಡ್ಡು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಿವೃತ್ತ ಶಿಕ್ಷಕ ಹಾಗೂ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮಾಜಿ ಅಧ್ಯಕ್ಷ ಕೇಪು ಸುಂದರ ಮಾಸ್ತರ್ ಅವರು ನೀಡಿರುವ ದತ್ತಿ ನಿಧಿಯನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಶಿಕ್ಷಕರಾದ ಮೀನಕುಮಾರಿ, ಶಿವಪ್ರಕಾಶ.ಕೆ, ಸವಿತಾ ಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ. ಕೆ ಉಪಸ್ಥಿತರಿದ್ದರು. ಶಿಕ್ಷಕ ಶಿವಪ್ರಕಾಶ್ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.