ಸುಳ್ಯ: ಶ್ರೀ ಭಗವತಿ ಯುವ ಸೇವಾ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ

ಸುಳ್ಯ; ಆ.15: ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ ಲೋಗೋ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.