ಬೂಡು ಅಂಗನವಾಡಿಯಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ ದಿನಾಚರಣೆ

ಸುಳ್ಯ: ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ಬೂಡು ಅಂಗನವಾಡಿಯಲ್ಲಿ ಸಂಭ್ರಮದ 78ನೇ ವರ್ಷದ ಸ್ವಾತಂತ್ರೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಂಘದ ನಿಕಟಪೂರ್ವಾಧ್ಯಕ್ಷ ಗೋಪಾಲ ಎಸ್. ನಡುಬೈಲು ಧ್ವಜಾರೋಹಣವನ್ನು ನೆರವೇರಿಸಿದರು. ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷ ಸೋನಿಯಾ, ಶ್ರೀ ಭಗವತಿ ಯುವ ಸೇವಾ ಸಂಘದ ಗೌರವಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಮತ್ತು ಮಾಜಿ ಅಧ್ಯಕ್ಷ ವಿಠಲ ರೈ ಬೂಡು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಕವಿತಾ ಸ್ವಾಗತಿಸಿ, ಬೂಡು ಕುಸುಮಾಧರ ರೈ ಕಾರ್ಯಕ್ರಮ ನಿರೂಪಿಸಿದರು.