ಎಲಿಮಲೆ: ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡಿರುವ ಆಂಗ್ಲ ಭಾಷಾ ಶಿಕ್ಷಕರಾದ ಸುಂದರ ಕೆ ಇವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಧನಂಜಯ ಬಾಳೆತೋಟ ಇವರು ವಹಿಸಿದ್ದರು. ಅಜ್ಜಾವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಿನಾಥ ಎಂ ಅಭಿನಂದನಾ ಭಾಷಣ ಮಾಡಿದರು.

ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕಿರಣ್ ಗುಡ್ಡೆಮನೆ, ಎಸ್ ಡಿ ಎಂ ಸಿ ಸದಸ್ಯರಾದ ಪುರುಷೋತ್ತಮ ಸುಳ್ಳಿ, ಕೃಷ್ಣಪ್ಪ ಹರ್ಲಡ್ಕ, ಗೋವಿಂದ ಪಾರೆಮಜಲು, ಲೀಲಾವತಿ ಹರ್ಲಡ್ಕ, ವಿಶಾಲಾಕ್ಷಿ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಕಜೆ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ, ಶಾಲಾ ವಿದ್ಯಾರ್ಥಿ ನಾಯಕಿ ರಕ್ಷಿತಾ ಪಿ ಎಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.