ಎಲಿಮಲೆ: ಸೆ 22: ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ನೆಲ್ಲೂರು ಕೇಮ್ರಾಜೆ ಗ್ರಾಮದ ಗಟ್ಟಿಗಾರು ಕಿ.ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮ ಸೆ.22ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕುಮಾರ್ ಕೋಟೆಮೂಲೆ ನೆರವೆರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಅಧ್ಯಕ್ಷ ಸಾತ್ವಿಕ್ ಮಡಪ್ಪಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ.ಕಿ.ಪ್ರಾ.ಶಾಲೆ ಗಟ್ಟಿಗಾರು ಇದರ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹರಿಪ್ರಸಾದ್ ಕೆ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಿತ್ರಾ ಬಿ ಎಸ್, ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಹರಿಪ್ರಸಾದ್ ಎಲಿಮಲೆ, ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್ ಇವರುಗಳು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಿಕ್ಷಕಿ ನಂದಿನಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು,ಪೊಷಕರು, ಊರಿನ ಹಿರಿಯರು, ಅಮರ ಸಂಘಟನಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.