ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಾಣಿಜ್ಯ ಹಾಗೂ ಉದ್ಯಮಾಡಳಿತ ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ಅ.23 ರಂದು ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಡಾ.ದಿನೇಶ್ ಪಿ.ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ರಾಮ ಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಚೇತನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಲತಾ ಬಿ.ಟಿ, ಉಪನ್ಯಾಸಕರಾದ ಮಧುರ, ಕೃತಿಕಾ ಉಪಸ್ಥಿತರಿದ್ದರು.

ಹರ್ಷಿತ ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ ಮಯೂರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮವನ್ನು ಅಂತಿಮ ವಾಣಿಜ್ಯ ಪದವಿಯ ವಿದ್ಯಾರ್ಥಿಗಳು ಆಯೋಜಿಸಿ ನಿಶಾ ಪ್ರಾರ್ಥಿಸಿದರು ಹಾಗೂ ಬಿಂದುಭಾರ್ಗವಿ ಸ್ವಾಗತಿಸಿ ಭಾರತಿ ವಂದಿಸಿದರು.